Home ನಮ್ಮ ಜಿಲ್ಲೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಜೋಶಿ ಭರವಸೆ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಜೋಶಿ ಭರವಸೆ

0
beLgAvi

ಬೆಳಗಾವಿ: ಅಭ್ಯರ್ಥಿಗಳ ಆಯ್ಕೆ ಚುನಾವಣೆ ತಯಾರಿ ಬಗ್ಗೆ ಇವತ್ತು ಸಮಾಲೋಚನೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು, ಬೆಳಗಾವಿಯಲ್ಲಿ ಭಾರತೀಯ ಜನತಾ ಪಕ್ಷ ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವತಿಯಿಂದ ನಡೆದ ಚುನಾವಣಾ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ, ನಮ್ಮದು ಡೆಮಾಕ್ರಟಿಕ್‌ ಪಾರ್ಟಿ, ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಎಕ್ಸಪರ್ಟ್, ಗ್ಯಾಸ್ ಸಿಡಿಲಿಂಡರ್‌ಗೆ ಹಣ ಕೊಡ್ತೇವಿ, ಹೆಣ್ಣು ಮಕ್ಕಳಿಗೆ ದುಡ್ಡು ಕೊಡ್ತೇವಿ ಅಂತ ಹೇಳ್ತಾರೆ, ಇವರ ಕಾಲದಲ್ಲಿ ಬೆಲೆ ಏರಿಕೆ ಎಷ್ಟಿತ್ತು ಎಂದು ಪ್ರಶ್ನೆ ಮಾಡಿದ ಜೋಶಿಯವರು, ಒಂದು ಕುಟುಂಬಕ್ಕೆ ವರ್ಷಕ್ಕೆ 78 ಸಾವಿರ ಕೊಡ್ತೇವಿ ಅಂತ ಹೇಳ್ತಿದ್ದಾರೆ ಅಲ್ಲದೇ ಗ್ಯಾರಂಟಿ ಕಾರ್ಡ್ ಕೊಡ್ತೇವಿ ಅಂತ ಹೇಳ್ತಿದ್ದಾರೆ ಅವರು ಏನು ಹೇಳ್ತಾರೋ ಅದನ್ನ ಮಾಡೋದೇ ಇಲ್ಲ ರಾಜಸ್ಥಾನದಲ್ಲಿ ಕೊಟ್ಟ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ ಕಳೆದ ಬಾರಿ ಕರ್ನಾಟಕದಲ್ಲಿ ಕೊಟ್ಟ ಭರವಸೆಯನ್ನೂ ಸಹ ಈಡೇರಿಸಿಲ್ಲ ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ದಿ ‌ಮಾಡುತ್ತಿದೆ ಎಂದರು.
ಅಪ್ಪನಿಗಾಗಿ ಮಗನ ದೊಡ್ಡ ತ್ಯಾಗ
ಬಿಜೆಪಿ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡಿರುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ವರುಣಾದಲ್ಲಿ ನಿಲ್ಲುತ್ತೇನೆ ಎಂದಿದ್ದಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದಂತೆ ಬಿಂಬಿಸುತ್ತಿದ್ದಾರೆ. ವರುಣಾದಲ್ಲಿ ಸೋಲಿನ ಭೀತಿಯಿಂದ ಈಗ ಮತ್ತೊಂದು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಸಿದ್ದರಾಮಯ್ಯ ರಾಜ್ಯದ 224 ಕ್ಷೇತ್ರಗಳಿಂದಲೂ ಸ್ಪರ್ಧೆ ಮಾಡ್ಲಿ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಪಾರ್ಟಿ ಇಸ್ ರಿಜೆಕ್ಟ್
ದೇಶದಲ್ಲೇ ಕಾಂಗ್ರೆಸ್ ಪಾರ್ಟಿ ಇಸ್ ರಿಜೆಕ್ಟ್ ಪಾರ್ಟಿ ಎಂದ ಜೋಶಿಯವರು ಮುಂಬರುವ ರಾಜಸ್ಥಾನ, ಛತ್ತೀಸಗಡ್ ರಾಜ್ಯದಲ್ಲೂ ಕಾಂಗ್ರೆಸ್ ಸೋಲುತ್ತೆ ಈ ಬಾರಿ ರಾಜ್ಯದಲ್ಲಿ ಮೋದಿಯವರ ಕೆಲಸ ನೋಡಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದರು.
ಬಿಜೆಪಿ ಟಿಕೆಟ್
ಟಿಕೆಟ್ ಕುರಿತು ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ ಬಹಿರಂಗ ಹೇಳಿಕೆ ವಿಚಾರ‌ ಅವರಿಬ್ಬರಿಗೂ ಬಹಿರಂಗವಾಗಿ ಮಾತನಾಡದಂತೆ ಈಗಾಗಲೇ ತಾಕೀತು ಮಾಡಿದ್ದೇವೆ, ಎಲ್ಲವನ್ನೂ ಗಮನಿಸುತ್ತಿದ್ದೆವೆ ಮತ್ತು ಎಲ್ಲವನ್ನೂ ಸರಿ ಮಾಡ್ತೇವಿ‌ ಬೆಳಗಾವಿಯಲ್ಲಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.

Exit mobile version