ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ: ಸಿಎಂ

0
11

ಬೆಂಗಳೂರು: ಕರ್ನಾಟಕದಲ್ಲಿ 15,000 ಮೆಗಾವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಉದ್ಘಾಟಿಸಿದ “ಇಂಡಿಯನ್ ಎನರ್ಜಿ ವೀಕ್-2023” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಶೇ. 50ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದರು.

Previous articleಬೆಳಗಾವಿಗೆ ಶೋಭಾ ಮೇಯರ್‌, ರೇಷ್ಮಾ ಉಪಮೇಯರ್‌
Next article‘ಭಾಗ್ಯದ ನಿಧಿ ತುಂಬಿ ತುಳುಕಿತಲೇ ಪರಾಕ್​​​​​​’