Home ನಮ್ಮ ಜಿಲ್ಲೆ ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಸಲು ಸರ್ಕಾರದ ಮಹತ್ವದ ಆದೇಶ

ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಸಲು ಸರ್ಕಾರದ ಮಹತ್ವದ ಆದೇಶ

0

ಬೆಂಗಳೂರು: ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಸುತ್ತೋಲೆ ಹೊರಡಿಸಿದೆ.
ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಿರುಪತಿ ಲಡ್ಡುವಿನಲ್ಲಿ ತುಪ್ಪದಲ್ಲಿ ದನದ ಮಾಂಸ, ಮೀನಿನ ಎಣ್ಣೆ ಅಂಶ ಪತ್ತೆಯಾಗಿರುವುದು ದೇಶಾದ್ಯಂತ ಸಾಕಷ್ಟು ತಲ್ಲಣ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದಗಳಿಗೆ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಿದೆ.

Exit mobile version