Home ನಮ್ಮ ಜಿಲ್ಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ

ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ

0
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹವೇ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದು
ಕೆಲವು ಕಾರ್ಯಕ್ರಮಗಳನ್ನು ಇಂದು ರಾತ್ರಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Exit mobile version