Home News ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ

ಬೆಳಗಾವಿ: ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದ ಅಭಿವೃದ್ಧಿ ಕೆಲಸಗಳಿಗೆ ವಿಮಾನ ನಿಲ್ದಾಣ ಪ್ರಾಧಿಕಾರ ಹೆಚ್ಚುವರಿ ಭೂಮಿಯ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಇಂದು ಸ್ಥಳದ ಪರಿಶೀಲನೆ ನಡೆಸಿದ ಅವರು, ವಿಮಾನ ನಿಲ್ದಾಣ ಅಭಿವೃದ್ಧಿಗೆ ನಮ್ಮ ಸಹಕಾರವಿದೆ, ಆದರೆ ಯಾವುದೇ ಕಾರಣದಿಂದ ಸುತ್ತಮುತ್ತಲಿನ ಮನೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜತೆಗೆ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

Exit mobile version