ಹುಬ್ಬಳ್ಳಿ: ಗುಂಟೂರು ವಿಭಾಗದಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಸಲುವಾಗಿ ಕೆಲ ರೈಲುಗಳನ್ನು ರದ್ದುಗೊಳಿಸಲು ದಕ್ಷಿಣ ಮಧ್ಯ ರೈಲ್ವೆ ವಲಯವು ನಿರ್ಧರಿಸಿದೆ.
ರೈಲು ಸಂಖ್ಯೆ ೧೭೩೨೯ ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಅಕ್ಟೋಬರ್ ೯ರಿಂದ ಅಕ್ಟೋಬರ್ ೧೦ ರವರೆಗೆ ರದ್ದುಗೊಳಿಸಲಾಗುತ್ತಿದೆ.
ರೈಲು ಸಂಖ್ಯೆ ೧೭೩೩೦ ವಿಜಯವಾಡ-ಎಸ್.ಎಸ್.ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲನ್ನು ಅಕ್ಟೋಬರ್ ೧೦ರಿಂದ ಅ. ೧೧ ರವರೆಗೆ ರದ್ದುಗೊಳಿಸಲಾಗುತ್ತಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.