Home ನಮ್ಮ ಜಿಲ್ಲೆ ದಾವಣಗೆರೆ ಲೋಕಾಯುಕ್ತ ಬಲೆಗೆ ವಿಶೇಷ ಸರ್ಕಾರಿ ಅಭಿಯೋಜಕಿ!

ಲೋಕಾಯುಕ್ತ ಬಲೆಗೆ ವಿಶೇಷ ಸರ್ಕಾರಿ ಅಭಿಯೋಜಕಿ!

0

ದಾವಣಗೆರೆ: ಪೋಕ್ಸೋ ಪ್ರಕರಣದ ಆರೋಪಿಗೆ ಸಹಾಯ ಮಾಡುವ ಸಂಬಂಧವಾಗಿ ಚೆಕ್ ರೂಪದಲ್ಲಿ ೧.೮೭ ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್.ಕೋಟೆಗೌಡರ್ ಭಾನುವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ.ಮದನ ಕುಮಾರ್ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧದ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು ರೇಖಾ 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ ೧.೧೭ ಲಕ್ಷ ರೂ. ಹಣವನ್ನು ಪಡೆದಿದ್ದು, ಉಳಿದ ೧.೮೭ ಲಕ್ಷ ರೂ. ಹಣದ ಚೆಕ್‌ನ್ನು ತಮ್ಮ ದಾವಣಗೆರೆ ನಿವಾಸದಲ್ಲಿ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೇಖಾ ಅವರನ್ನು ವಶಕ್ಕೆ ಪಡೆದಿದ್ದಾರೆ.

Exit mobile version