ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ ಧಾರವಾಡ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ.
ಅಕ್ಟೋಬರ್ ೭ರಿಂದ ಜಾರಿಗೆ ಬರುವಂತೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ.
ರೈಲು ಸಂಖ್ಯೆ ೨೦೬೬೧ ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಎಸ್.ಎಸ್.ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ ೧೧:೩೦/೧೧:೩೫ ರ ಬದಲು ಬೆಳಿಗ್ಗೆ ೧೧:೦೦/೧೧:೦೫ ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
ರೈಲು ಸಂಖ್ಯೆ ೨೦೬೬೨ ಧಾರವಾಡ-ಕೆ.ಎಸ್.ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಯಶವಂತಪುರ ನಿಲ್ದಾಣಕ್ಕೆ ಸಂಜೆ ೦೭:೧೩/೦೭:೧೫ರ ಬದಲು ಸಂಜೆ ೦೬:೫೮/೦೭:೦೦ ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ. ಈ ರೈಲುಗಳ ಸಮಯವು ಇತರ ಎಲ್ಲಾ ನಿಲ್ದಾಣಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.