Home Advertisement
Home ನಮ್ಮ ಜಿಲ್ಲೆ ವಸತಿ ನಿಲಯದಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಸತಿ ನಿಲಯದಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0
107
ಆತ್ಮಹತ್ಯೆ

ಬೆಳಗಾವಿ: ವಿದ್ಯಾರ್ಥಿಯೊಬ್ಬ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆ ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.