ಖ್ಯಾತ ಕಥೆಗಾರ, ನಿವೃತ್ತ ಪ್ರಾಧ್ಯಾಪಕ ಮೊಗಳ್ಳಿ ಗಣೇಶ್ ಇನ್ನಿಲ್ಲ

0
82

ಹೊಸಪೇಟೆ: ಖ್ಯಾತ ಕಥೆಗಾರ, ಹಂಪಿ ಕನ್ನಡ ವಿವಿಯ ನಿವೃತ್ತ ಪ್ರಾಧ್ಯಾಪಕ ಮೊಗಳ್ಳಿ ಗಣೇಶ್(64) ಭಾನುವಾರ ಬೆಳಿಗ್ಗೆ ನಿಧನರಾದರು.

ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇದೀಗ ಅಂಗಾಂಗ ವೈಫಲ್ಯದಿಂದಾಗಿ ವಿಧಿವಶರಾಗಿದ್ದಾರೆ. ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ಚಂದ್ರಶೇಖರ್ ಕಂಬಾರರ ಕಾಲದಲ್ಲಿ ಹಂಪಿ ಕನ್ನಡ ವಿವಿಗೆ 1996ರಲ್ಲಿ ಸಂಶೋಧನಾ ಸಹಾಯಕರರಾಗಿ ಆಗಮಿಸಿದ್ದ ಅವರು, 1997ರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಪ್ರಾರಂಭಿಸಿ, 2023 ರವರೆಗೆ ಸೇವೆ ಹಂಪಿ ಕನ್ನಡ ವಿವಿಯಲ್ಲಿ ಸಲ್ಲಿಸಿ, ಬಳಿಕ ನಿವೃತ್ತಿ ಹೊಂದಿದ್ದರು.

ಬುಗರಿಯಿಂದ ಆರಂಭವಾದ ಕಥೆಗಳು, ಹತ್ತಾರು ಪುಸ್ತಕಗಳು ಬರೆದಿದ್ದಾರೆ. ಸಾಹಿತ್ಯ ಅಕಾಡಮಿ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪಡೆದಿದ್ದ ಮೊಗಳ್ಳಿ ಗಣೇಶ್ ಹಾಲಿ ಜಾನಪದ ವಿವಿಯ ಸಿಂಡಿಕೇಟ್ ಸದಸ್ಯರಾಗಿದ್ದರು

ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮೊಗಳ್ಳಿ ಗ್ರಾಮದವರಾದ್ದ ಗಣೇಶ್, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡದ ವಿವಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಅನಾರೋಗ್ಯದಿಂದ ಭಾನುವಾರ ಬೆಳಗಿನ ಜಾವ ನಿಧನರಾಗಿದ್ದು, ಹುಟ್ಟೂರು ಮೊಗಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Previous articleಕಾಂತಾರ ಚಾಪ್ಟರ್ 1: ಯಶ್ ದಂಪತಿಯ ಮೆಚ್ಚುಗೆ
Next articleಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಕಣ ಸಜ್ಜು

LEAVE A REPLY

Please enter your comment!
Please enter your name here