ಬೆಂಗಳೂರು: ನಮ್ಮ ವಿಜಯಪುರ ಜಿಲ್ಲೆ ರಾಜ್ಯಕ್ಕೆ 3ನೇ ಸ್ಥಾನ ಪಡೆದಿರುವುದು ಸಂತಸ ತರಿಸಿದೆ ಎಂದು ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ನಮ್ಮ ವಿಜಯಪುರ ಜಿಲ್ಲೆ ರಾಜ್ಯಕ್ಕೆ 3ನೇ ಸ್ಥಾನ ಪಡೆದಿರುವುದು ಸಂತಸ ತರಿಸಿದೆ. ಕಳೆದ ಬಾರಿ 5ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 3ನೇ ಸ್ಥಾನಕ್ಕೆ ಬಡ್ತಿ ಪಡೆದಿರುವುದು ಹೆಮ್ಮೆಯ ಸಂಗತಿ. ರಾಜ್ಯದಲ್ಲೇ ಈ ಬಾರಿ ಪಿಯುಸಿಯಲ್ಲಿ ಶೇ. 81.15 % ತೇರ್ಗಡೆಯೊಂದಿಗೆ ಅತ್ಯುತ್ತಮ ಫಲಿತಾಂಶ ಪ್ರಕಟಗೊಂಡಿರುವುದು ಹರ್ಷದಾಯಕ. ಉತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳು. ನಿರೀಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ನಿರಾಶೆಗೊಳಗಾಗಬೇಡಿ. ಆಸಕ್ತಿಯಿಂದ ಓದು ಮುಂದುವರೆಸಿ, ಪರೀಕ್ಷೆ ಎದುರಿಸಿ, ಖಂಡಿತ ಯಶಸ್ಸು ನಿಮ್ಮದಾಗಲಿದೆ ಎಂದಿದ್ದಾರೆ.