Home ತಾಜಾ ಸುದ್ದಿ ವಿಪಕ್ಷ ನಾಯಕನ ಬಗ್ಗೆ ಕಾಂಗ್ರೆಸ್‌ ತಲೆ ಕೆರೆದುಕೊಳ್ಳುವುದು ಬೇಡ

ವಿಪಕ್ಷ ನಾಯಕನ ಬಗ್ಗೆ ಕಾಂಗ್ರೆಸ್‌ ತಲೆ ಕೆರೆದುಕೊಳ್ಳುವುದು ಬೇಡ

0
BJP

ಬೆಂಗಳೂರು: ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೆ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ ಎಂದು ಬಿಜೆಪಿ ಹೇಳಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕ ‘ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೆ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು, ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ದವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರಕಾರಕ್ಕೆ ಸಲಹೆ ನೀಡಲಿ’ ಎಂದು ಹೇಳಿದೆ.
ವಿಪಕ್ಷ ನಾಯಕನ ಕುರಿತು ಶನಿವಾರ ತುರ್ತಾಗಿ ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಪ್ರಕಟಣೆ ಮಾದರಿಯಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಇಂದು ಬಿಜೆಪಿ ತಿರುಗೇಟು ನೀಡಿದೆ.

Exit mobile version