ವಿವಿಧ ಕನ್ನಡಪರ ಸಂಘಟನೆಗಳಿಂದ ಕನ್ನಂಬಾಡಿ ಅಣೆಕಟ್ಟೆ ಮುತ್ತಿಗೆ ಯತ್ನ-ಹೋರಾಟಗಾರರ‌ ಬಂಧನ

0
12

ಶ್ರೀರಂಗಪಟ್ಟಣ; ತಾಲ್ಲೂಕಿನ ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸು ವಿವಿಧ ಕನ್ನಡಪರ ಸಂಘಟನೆಗಳ‌ ಪಾದಾಧಿಕಾರಿಗಳು ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೋಲೀಸರು ಅವರನ್ನು ಬಂಧಿಸಿದ ಘಟನೆ ನಡೆಯಿತು.
ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇಧಿಕೆ, ಕರ್ನಾಟಕ ರಕ್ಷಣಾ ವೇಧಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರುಗಳನ್ನು ಬಂಧಿಸಿ ಕರೆದೊಯ್ಯಲಾಯಿತು. ರೈತರಿಗೆ ದ್ರೋಹ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ರಕ್ತ ಚೆಲ್ಲುತ್ತೇವೆ ಕಾವೇರಿ ಉಳಿಸುತ್ತೇವೆ, ನೀರು ನಿಲ್ಲಿಸಿದರೆ ಶಾಂತಿ. ನೀರು ಬಿಟ್ಟರೆ ಕ್ರಾಂತಿ ಎಂಬ ಘೋಷಣೆಯೊಂದಿಗೆ ಅಣೆಕಟ್ಟೆ ಬಳಿ ಪ್ರತಿಭಟನೆ ನಡೆಸಿದರು.


ಕೆ ಆರ್ ಎಸ್ ಜಲಾಶಯದಿಂದ ರಾತ್ರೋರಾತ್ರಿ ನೀರು ಬಿಡುವ ಮೂಲಕ ರೈತ ವಿರೋಧಿ ಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಮರಣ ಶಾಸನ ಬರೆದಿದೆ. ಕಾವೇರಿ ಕೊಳ್ಳದ ಜಲಾಶಯ ಭರ್ತಿಯಾಗಿಲ್ಲ, ಇಲ್ಲಿನ ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಸಾಕಾಗುತ್ತಿಲ್ಲ,ಹೊಸ ಬೆಳೆ ನಾಟಿ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ, ಇಂತಹ ಸಂದರ್ಭದಲ್ಲಿ ಸತತವಾಗಿ ತಮಿಳುನಾಡಿಗೆ ನೀರು ಹರಿಸಿ ಜಲಾಶಯಗಳನ್ನ ಬರಿದು ಮಾಡಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಕಾವೇರಿ ನೀರು ಪ್ರಾಧಿಕಾರ ನೀರು ಬಿಡುವಂತೆ ಯಾವುದೇ ಆದೇಶ ಮಾಡಿರದಿದ್ದರೂ ರಾಜಕೀಯ ಉದ್ದೇಶದಿಂದ ತಮಿಳುನಾಡು ಒಲೈಸಿಕೊಳ್ಳಲು ನೀರು ಬಿಟ್ಟಿರುವ ಸರ್ಕಾರಕ್ಕೆ ಕನ್ನಡ ನಾಡಿನ ರೈತರ ಬಗ್ಗೆ ಅಭಿಮಾನ ಇಲ್ಲವಾಗಿದೆ ಎಂದು ಕಿಡಿಕಾರಿದರು. ಸುಮಾರು ಒಂದು ಗಂಟೆಗೂ ಅಧಿಕ ಪ್ರತಿಭಟನೆಯ ಬಳಿಕ ಅಷೆಕಟ್ಟಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ಎಎಸ್ಪೀ ತಿಮ್ಮಯ್ಯ ನೇತೃತ್ವದಲ್ಲಿ‌ ಪೋಲೀಸರು ಹೋರಾಟಗಾರರನ್ನು‌ ಬಂಧಿಸಿ ಕರೆದೊಯ್ದರು.

Previous articleನೀರು ನಿಲ್ಲಿಸಿದರೆ ಶಾಂತಿ ನೀರು ಬಿಟ್ಟರೆ ಕ್ರಾಂತಿ
Next articleರಾಜ್ಯ ವಿಧಾನ ಪರಿಷತ್‌ ಚುನಾವಣೆಗೆ ಉಸ್ತುವಾರಿಗಳ ನೇಮಕ