ಶಟಲ್ ಬಸ್ ಅಪಘಾತ: 10 ಮಂದಿಗೆ ಗಾಯ

0
9

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 17 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಟಲ್ ಬಸ್ ಭಾನುವಾರ ಬೆಳಗ್ಗೆ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಗು ಸೇರಿದಂತೆ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ಬಸ್‌ನ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವರದಿಗಳ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಡುವೆ ಕಾರ್ಯನಿರ್ವಹಿಸುತ್ತಿದ್ದ ಶಟಲ್ ಬಸ್ ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಅಪಘಾತದ ಘಟನೆ ಬಗ್ಗೆ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Previous articleಗೊಂದಲಕ್ಕೆ ಅವಕಾಶ ಕೊಡಬಾರದೆನ್ನುವ ಕಾರಣಕ್ಕೆ ಯೋಜನೆಗಳ ಅನುಷ್ಠಾನದಲ್ಲಿ ಸ್ವಲ್ಪ ವಿಳಂಬ
Next articleಬಿಜೆಪಿ ಸಂಸದರೆಲ್ಲರೂ ಸೇರಿ ಬಡವರಿಗೆ ಅಕ್ಕಿ ಕೊಡಿಸಲು ಸಹಕಾರ ನೀಡಿ