Home ತಾಜಾ ಸುದ್ದಿ ಶಾಮನೂರು ಶಿವಶಂಕರಪ್ಪ ಪ್ರಶ್ನೆಗೆ ಸಿಎಂ ಉತ್ತರಿಸಲಿ

ಶಾಮನೂರು ಶಿವಶಂಕರಪ್ಪ ಪ್ರಶ್ನೆಗೆ ಸಿಎಂ ಉತ್ತರಿಸಲಿ

0

ಹುಬ್ಬಳ್ಳಿ: ಲಿಂಗಾಯತ ಅಧಿಕಾರಿಗಳ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎತ್ತಿರುವಂತಹ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬರುತ್ತಿದೆ. ವರ್ಗಾವಣೆ ವಿಷಯದಲ್ಲಿ ಬಹಳಷ್ಟು ಅಸಮಾಧಾನಕ್ಕೆ ಈಡಾಗಿದೆ. ಎಲ್ಲಾ ಸಮಾಜಕ್ಕೂ ನ್ಯಾಯ ಕೊಡುತ್ತೇವೆ ಅಂತ ಹೇಳಿದ್ದರು. ಆದರೆ ಅದು ಆಗಿಲ್ಲ‌. ಈಗ ಬೇರೆ ಬೇರೆ ರೂಪದಲ್ಲಿ ಹೊರಗೆ ಬರುತ್ತಿದೆ. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರು ಎತ್ತಿರುವಂತಹ ಪ್ರಶ್ನೆಗಳಿಗೆ ಸಿಎಂ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ. ಮುಖ್ಯಮಂತ್ರಿಗಳು ಇದನ್ನು ಎಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತಾರೆ ಅಷ್ಟು ಕೆಟ್ಟ ಹೆಸರು ಬರುತ್ತದೆ ಎಂದರು.

Exit mobile version