ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡುವಂತೆ ನಾಳೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಎಂದು ಅವರು ಹೇಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ಇಡುವುದೇ ಸೂಕ್ತ. ಈ ಸಂಬಂಧ ರಾಜ್ಯ ಸರ್ಕಾರ ನಿರ್ಣಯವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದಿದ್ದಾರೆ.