ಶಿವಮೊಗ್ಗ ವಿಮಾನ ನಿಲ್ದಾಣ: ಆ.31ರಿಂದ ವಿಮಾನ ಹಾರಾಟ ಆರಂಭ

0
13

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದ್ದು, ಇಂಡಿಗೊ‌ ಏರ್‌ಲೈನ್ಸ್ ತನ್ನ ಬುಕ್ಕಿಂಗ್‌ನ್ನು ಆರಂಭಿಸಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್‌ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಅವರು ತಿಳಿಸಿದ್ದಾರೆ.

Previous articleಮಸೀದಿ ಉದ್ಘಾಟಿಸಿದ ಗವಿಶ್ರೀ
Next articleಗೃಹಲಕ್ಷ್ಮೀ ನೋಂದಣಿಗೆ ಹಣ ವಸೂಲಿ: ಇಬ್ಬರ ವಿರುದ್ಧ ದೂರು ದಾಖಲು