ಶಿವರಾತ್ರಿ ಹಬ್ಬದಂದೇ ಮಂತ್ರಿ ಮಾಲ್‌ಗೆ ಶಾಕ್ |

0
10

ಬೆಂಗಳೂರು: ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಮಾಲ್​​ಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ಬೀಗ ಜಡಿಯಲು ಮುಂದಾಗಿದ್ದಾರೆ. ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಯೋಗೀಶ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 43 ಕೋಟಿ ರೂ ತೆರಿಗೆಯನ್ನು ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿತ್ತು. ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ.

Previous articleರಾಯಲ್ ಚಾಲೆಂಜರ್ಸ್ ತಂಡದ ನಾಯಕಿಯಾಗಿ ಸ್ಮೃತಿ ಮಂಧನಾ
Next articleಫೆ.23 ಕ್ಕೆ ಅಮಿತ್ ಶಾ ಭೇಟಿ : ಕಲ್ಯಾಣ ಕರ್ನಾಟಕ ನಾಯಕರ ಜೊತೆ ಸಭೆ