Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್‌ ಲೋಕಾರ್ಪಣೆ

ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್‌ ಲೋಕಾರ್ಪಣೆ

0
111

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಫೆ. 11 ರಂದು ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್‌ ಅನ್ನು‌ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿ‌ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ಸಂದರ್ಶಕರ ಪುಸ್ತಕದಲ್ಲಿ‌ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ ಮಾಡಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ನಳೀನಕುಮಾರ್ ಧರ್ಮಶ್ರೀ ಪ್ರತಿಷ್ಠಾನ ಪ್ರತಿಷ್ಠಾನದ ಪ್ರಮುಖರು ಇತರರು ಇದ್ದರು.