Home ಸುದ್ದಿ ದೇಶ ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಸಚಿವ ಜೋಶಿ ಸಂತಾಪ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಸಚಿವ ಜೋಶಿ ಸಂತಾಪ

0

ಹುಬ್ಬಳ್ಳಿ : ನಡೆದಾಡುವ ದೇವರೆಂದೇ ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿರುವ ಸಂಗತಿ ನಿಜಕ್ಕೂ ಊಹಿಸಲಸಾದ್ಯ. ಎರಡು ದಿನಗಳ ಹಿಂದೆಯಸ್ಟೇ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರೂ ಸಹ ಸ್ವಾಮೀಜಿಗಳ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದರು. ಇಷ್ಟು ಬೇಗ ನಮ್ಮನ್ನೆಲ್ಲ ಬಿಟ್ಟುಹೋಗಿರುವುದು ನಿಜಕ್ಕೂ ಶೋಚನೀಯ ಎಂದು ಕೇಂದ್ರ ಸಚಿವ ಶ್ರೀ ಪ್ತಲ್ಹಾದ ಜೋಶಿಯವರು ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು, ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ.
ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
ಶ್ರೀಗಳ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.
ಅವರ ದಿವ್ಯಾತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

Exit mobile version