ಸತೀಶ್‌ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆ

0
11
ಜಾರಕಿಹೊಳಿ ವಾಹನ

ಬೆಳಗಾವಿ: ರಾಜ್ಯದಲ್ಲಿ ಈ ಭಾರೀ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಪ್ರಚಾರಕ್ಕಾಗಿ ನೂತನ ವಾಹನ ಸಿದ್ದಪಡಿಸಿದ್ದು, ಈ ವಾಹನ ಬೆಳಗಾವಿ ಜಿಲ್ಲೆಯ 18 ಮತಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ಬಳಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ಕಾಂಗ್ರೆಸ್‌ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಯವರು ಸಿದ್ದಪಡಿಸಿದ ನೂತನ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ವಾಹನವನ್ನು ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬಳಸಲಿದ್ದಾರೆ. ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಿಯಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ನಾನು ಕೂಡ ಈ ವಾಹನವನ್ನು ಬೆಳಗಾವಿಗೆ ಬಂದಗಾ ಪ್ರಚಾರಕ್ಕಾಗಿ ಬಳಸಲಿದ್ದೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯಲ್ಲಿ 6 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆದರೆ ಈ ಭಾರೀ ಕಾಂಗ್ರೆಸ್‌ ಪರ ಅಲೆ ಇದೆ. ಹೀಗಾಗಿ ಬೆಳಗಾವಿಯಲ್ಲಿ 15 ಸೀಟು ನಾವು ಗೆಲುವು ಸಾಧಿಸಲಿದ್ದೇವೆ, ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ‌ ನೀತಿಯಿಂದ ಜನರು ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Previous articleರಾಜಕೀಯಕ್ಕೆ ನಾನು ಆಕಸ್ಮಿಕವಾಗಿ ಬಂದವ, ಅಧಿಕಾರ ಲಾಲಸೆಗೆ ಅಲ್ಲ: ಶೆಟ್ಟರ ನೋವಿನ ನುಡಿ
Next articleಚುನಾವಣಾ ಅಕ್ರಮಗಳ ಮೇಲೆ ಹದ್ದಿನಕಣ್ಣು: “ನ್ಯಾಯಸಮ್ಮತ ಚುನಾವಣೆ-ನಮ್ಮ ಜವಾಬ್ದಾರಿ”