Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಸಹೋದರಿಯರು ಆತ್ಮಹತ್ಯೆ

ಸಹೋದರಿಯರು ಆತ್ಮಹತ್ಯೆ

0
91
ಆತ್ಮಹತ್ಯೆ

ಮಂಗಳೂರು: ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (೭೦) ಮತ್ತು ಸುಂದರಿ ಶೆಟ್ಟಿ (೮೦) ಎಂಬ ಸಹೋದರಿಯರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
೭೮ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ ೪:೩೦ರ ವೇಳೆಗೆ ಮನೆಗೆ ತೆರಳಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಜಗನ್ನಾಥ ಭಂಡಾರಿ ಮನೆಗೆ ತೆರಳಿದಾಗ ಮನೆಯ ಬಾಗಿಲು ಮುಚ್ಚಲ್ಪಟ್ಟಿತ್ತು. ಕಿಟಕಿಯಿಂದ ನೋಡಿದಾಗ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರಿದಿದೆ.