Home ಅಪರಾಧ ಸಾಧುನವರ ಒಡೆತನದ ಬ್ಯಾಂಕ್ ಮೇಲೆ ಐಟಿ ದಾಳಿ

ಸಾಧುನವರ ಒಡೆತನದ ಬ್ಯಾಂಕ್ ಮೇಲೆ ಐಟಿ ದಾಳಿ

0

ಬೆಳಗಾವಿ: ಕಾಂಗ್ರೆಸ್ ಮುಖಂಡ ವಿ.ಎಸ್. ಸಾಧುನವರ ಒಡೆತನದ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದಿದೆ.
ಕಿತ್ತೂರು ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಮೇಲೆ ದಾಳಿ ನಡೆದಿದೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿರುವ ಸಹಕಾರಿ ಬ್ಯಾಂಕ್ ಮೇಲೆ ಸ್ಥಳೀಯ ಪೊಲೀಸರ ನೆರವು ಪಡೆದು ಗೋವಾ ವಲಯದ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.ಸುಮಾರು 15 ಜನ ಅಧಿಕಾರಿಗಳಿಂದ ರಾತ್ರಿಯಾದರೂ ಶೋಧಕಾರ್ಯ ನಡೆದಿತ್ತು. ಬ್ಯಾಂಕ್ ವ್ಯವಸ್ಥಾಪಕ ಈರಣ್ಣ ನಾನಣ್ಣವರ ಅವರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗಿದೆ. ಬ್ಯಾಂಕಿನಲ್ಲಿದ್ದ ಅಂದಾಜು 262 ಲಾಕರ್‌ಗಳ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು
ಲಾಕರ್ ಹೊಂದಿರುವ ಗ್ರಾಹಕರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದರು ಎಂದು ಮಾಹಿತಿ ಮೂಲಗಳು ತಿಳಿಸಿವೆ.

Exit mobile version