ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದ ಘಟನೆ ಮೈಸೂರಿನ ಟಿ.ಕೆ ಬಡಾವಣೆಯಲ್ಲಿ ನಡೆದಿದೆ.
ಬೆಳಗ್ಗೆ 8 ಗಂಟೆ ಸುಮಾರಿಗೆ ವ್ಯಕ್ತಿಯೋರ್ವ ಕಲ್ಲು ಎಸೆದಿದ್ದು, ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಸತ್ಯಮೂರ್ತಿ ಎನ್ನುವವನೇ ಕಲ್ಲು ಎಸೆದವನೆಂದು ಗುರುತಿಸಲಾಗಿದ್ದು, ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.