Home ನಮ್ಮ ಜಿಲ್ಲೆ ಕೊಪ್ಪಳ ಸಿಟಿ ರವಿ ಲೂಟಿ ರವಿ: ಶಿವರಾಜ ತಂಗಡಗಿ ಆರೋಪ

ಸಿಟಿ ರವಿ ಲೂಟಿ ರವಿ: ಶಿವರಾಜ ತಂಗಡಗಿ ಆರೋಪ

0
83
ಶಿವರಾಜ ತಂಗಡಗಿ

ಕುಷ್ಟಗಿ: ಸಿಟಿ ರವಿ ಲೂಟಿ ರವಿಯಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಸಿದ್ದರಾಮಯ್ಯನವರ ರಾಜಕೀಯ ಅನುಭವದಷ್ಟು ವಯಸ್ಸು ಸಹ ಇವರಿಗಾಗಿಲ್ಲ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಛೇಡಿಸಿದರು.
ಪಟ್ಟಣದ ಸರ್ಕ್ಯೂಟ್‌ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಕೇವಲ ಜಾತಿ ಧರ್ಮದ ನಡುವೆ ರಾಜಕಾರಣ ಮಾಡುವ ವ್ಯಕ್ತಿಯಾಗಿದ್ದಾನೆ. ಬಿಜೆಪಿ ಸರ್ಕಾರದಲ್ಲಿ ಅನೇಕ ಜನ ಹಿಂದೂಗಳು ಹತ್ತೆಯಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದು. ಯಾಕೆ ಸುಮ್ಮನೆ ಕುಳಿತುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.