ಸಿದ್ದರಾಮಯ್ಯ ವಿರುದ್ಧ ಚುನಾವಣ ಅಖಾಡಕ್ಕೆ ವಿಜಯೇಂದ್ರ !

0
12
ವಿಜಯೇಂದ್ರ

ಮೈಸೂರು: ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧ ಎಂದ ಬಿ.ವೈ.ವಿಜಯೇಂದ್ರ. ಪಕ್ಷ ಯಾವುದೇ ಸವಾಲು ಕೊಟ್ಟರೂ ನಾನು ನಿಭಾಯಿಸುತ್ತೇನೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿಕೆ. ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡ್ತಿದ್ದೇನೆ. ನರೇಂದ್ರ ಮೋದಿ ಎಂಬುದು ಬರೀ ಅಲೆ ಅಲ್ಲ, ಅದೊಂದು ಸುನಾಮಿ ಎಂದರು, ‘ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧವಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಇಲ್ಲಿ ಭಾನುವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ.‌ ಪಕ್ಷದ ತೀರ್ಮಾನವೇ ಅಂತಿಮ’ ಎಂದು ಪರೋಕ್ಷವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಸುವ ಆಸೆಯನ್ನು ವ್ಯಕ್ತಪಡಿಸಿದರು. ‘ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷವು ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಸಂಘಟನೆ ಬಲಪಡಿಸುತ್ತಿದ್ದೇವೆ’ ಎಂದರು. ‘ನರೇಂದ್ರ ಮೋದಿ ಎಂಬುದು ಕೇವಲ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್‌ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಏಕೆಂದರೆ ಆ ಪಕ್ಷದವರು ಭ್ರಮೆಯಲ್ಲಿದ್ದಾರೆ. ಆದ್ದರಿಂದಲೇ, ಗುಜರಾತ್ ಫಲಿತಾಂಶದ ಪರಿಣಾಮವು ಕರ್ನಾಟಕದ ಚುನಾವಣೆ ಮೇಲೆ ಆಗುವುದಿಲ್ಲ ಎಂದು ಹೇಳುತ್ತಿದೆ. ಮುಂಬರುವ ಚುನಾವಣೆ ನಂತರ ಕಾಂಗ್ರೆಸ್‌ಗೆ ಉತ್ತರ‌ ಸಿಗಲಿದೆ’ ಎಂದು ಪ್ರತಿಕ್ರಿಯಿಸಿದರು.

Previous article34 ಗ್ರಾಂ ಆಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನಿಗೆ ಸನ್ಮಾನ
Next articleಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ