ಶಿವಮೊಗ್ಗ: ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಇಂದು ನಿವೃತ್ತ ಕೆಇಎಸ್ ಅಧಿಕಾರಿ ಶ್ರೀ ಎಚ್.ಟಿ.ಬಳಿಗಾರ್ ಹಾಗೂ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನರ ದಾರಿ ತಪ್ಪಿಸಲು ವಿಪಕ್ಷಗಳು ಎಷ್ಟೇ ಪ್ರಯತ್ನಿಸಲಿ, ನಮ್ಮ ಪಕ್ಷದ ಮೇಲೆ ಜನರ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮುಂಬರುವ ವಿಧಾನಸಭಾ ಚುನಾವಣೆಯ ಸೋಲಿನ ಭಯದಿಂದಾಗಿ ಕಾಂಗ್ರೆಸ್ ಮತದಾರರ ಮಾಹಿತಿ ಕಳವು ಆರೋಪವನ್ನು ಬಿಜೆಪಿ ಮೇಲೆ ಹೊರಿಸುತ್ತಿದೆ ಎಂದು ತಿರುಗೇಟು ಕೊಟ್ಟರು.


























