ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿಸಲು ಅವಕಾಶ

0
7

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ನೀಯೋಗದ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಪ್ರತಿಕ್ರಿಯಿಸಿ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

Previous articleಬೆಂಗಳೂರು-ಮೈಸೂರು ಜನತೆಗೆ ಕುಡಿವ ನೀರು ಬಂದ್: ರೈತರ ಎಚ್ಚರಿಕೆ
Next articleಶ್ರೀರಂಗಪಟ್ಟಣದಲ್ಲಿ ‘ಜಾಗಟೆ ಬಾರಿಸಿ ಪ್ರತಿಭಟನೆ’ : ಗೋವಿಂದ..! ಗೋವಿಂದ..! ಕೂಗಿ ಆಕ್ರೋಶ