ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

0
10

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿ ಆತಂಕ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸಾವನ್ನಪ್ಪಿರೋದು ಎಲ್ಲರಿಗೂ ಆಘಾತವಾಗಿದೆ. ಅವರು ಆರೋಗ್ಯಯುತವಾಗಿ ಇದ್ದರು. ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಅಪಾರ ಸಾವು ನೋವು ಆಗ್ತಾ ಇದೆ‌. ಅದರಲ್ಲೂ ಕೋವಿಡ್ ನಂತರ ಎಲ್ಲರ ಮೇಲೂ ಪರಿಣಾಮ ಬೀರಿದೆ. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಹೇಳಿದ್ದಾರೆ.

Previous articleತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ನದಿಗಿಳಿದು ಪ್ರತಿಭಟನೆ
Next articleರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: ‘ಇಂಡಿಯಾ’ ಮೈತ್ರಿಕೂಟ ಸಂಭ್ರಮಾಚರಣೆ