Home ನಮ್ಮ ಜಿಲ್ಲೆ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

0

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿ ಆತಂಕ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸಾವನ್ನಪ್ಪಿರೋದು ಎಲ್ಲರಿಗೂ ಆಘಾತವಾಗಿದೆ. ಅವರು ಆರೋಗ್ಯಯುತವಾಗಿ ಇದ್ದರು. ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಅಪಾರ ಸಾವು ನೋವು ಆಗ್ತಾ ಇದೆ‌. ಅದರಲ್ಲೂ ಕೋವಿಡ್ ನಂತರ ಎಲ್ಲರ ಮೇಲೂ ಪರಿಣಾಮ ಬೀರಿದೆ. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಹೇಳಿದ್ದಾರೆ.

Exit mobile version