Home ನಮ್ಮ ಜಿಲ್ಲೆ ದಾವಣಗೆರೆ ಹಳ್ಳದ ಸೇತುವೆಗೆ ಬಸ್ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹಳ್ಳದ ಸೇತುವೆಗೆ ಬಸ್ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0

ದಾವಣಗೆರೆ: ದಾವಣಗೆರೆ ಹೊರ ವಲಯದ ಎಲೆಬೇತೂರು ರಸ್ತೆಯಲ್ಲಿರುವ ಹಳ್ಳದ ಸೇತುವೆಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಜಗಳೂರು ಕಡೆಯಿಂದ ದಾವಣಗೆರೆ ಕಡೆ ಬರುತ್ತಿದ್ದ ಖಾಸಗಿ ಬಸ್ ಎಲೆಬೇತೂರು ಸಮೀಪ ಹಳ್ಳದ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಒಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ರಕ್ಷಿಸಲು ಸ್ಥಳೀಯರು ಹರಸಾಹಸಪಟ್ಟರು. ಅಜಾದ್ ನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version