Home ನಮ್ಮ ಜಿಲ್ಲೆ ಹಾವೇರಿ: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹಾವೇರಿ: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜು.27ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶಿಸಿದ್ದಾರೆ.

ಜಿಲ್ಲಾದ್ಯಂತ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಸಹ ಮಳೆ ಮುಂದುವರೆಯುವ ಸಂಭವ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಪ್ರಕಟಿಸಿದರು.

Exit mobile version