Home ನಮ್ಮ ಜಿಲ್ಲೆ ಹಾವೇರಿ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹಾವೇರಿ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜು. ೨೪ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶಿಸಿದ್ದಾರೆ.
ಜಿಲ್ಲಾದ್ಯಂತ ಬಿಟ್ಟು ಬಿಡದೇ ಅತಿಯಾಗಿ ಮಳೆ ಸುರಿಯುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳ ತರಗತಿಗಳು ಎಂದಿನಂತೆ ನಡೆಯುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version