ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಅನ್ವಯ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಹೇಳಿದೆ.