Home ನಮ್ಮ ಜಿಲ್ಲೆ ಹಿಂದೂ ಎಂಬ ಪದದ ಅರ್ಥ ಅಸಭ್ಯ: ಕಾಂಗ್ರೆಸ್‌ ನಾಯಕ ಸತೀಶ ಜಾರಕಿಹೊಳಿ

ಹಿಂದೂ ಎಂಬ ಪದದ ಅರ್ಥ ಅಸಭ್ಯ: ಕಾಂಗ್ರೆಸ್‌ ನಾಯಕ ಸತೀಶ ಜಾರಕಿಹೊಳಿ

0

ನಿಪ್ಪಾಣಿ (ಬೆಳಗಾವಿ): ‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ.
ಮಾನವ ಬಂಧುತ್ವ ವೇದಿಕೆಯಿಂದ ಪಟ್ಟಣದಲ್ಲಿ ರಾತ್ರಿ ಆಯೋಜಿಸಿದ್ದ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.

Exit mobile version