ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

0
13
lohith

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಹಲವು ದಿಗ್ಗಜರೊಂದಿಗೆ ತೆರೆ ಹಂಚಿಕೊಂಡಿದ್ದ ಲೋಹಿತಾಶ್ವ ಅವರು, ಖಳ ನಟ ಹಾಗೂ ಪೋಷಕ ನಟನಾಗಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಪತ್ನಿ ವತ್ಸಲಾ, ಪುತ್ರ ನಟ ಶರತ್‌, ವಿನಯ್‌ ಮತ್ತು ಮಗಳು ವಿನಯಾ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.

Previous article`ತಪ್ಪು ಎಂದು ಸಾಬೀತಾದರೆ ರಾಜೀನಾಮೆ’
Next article20ರಿಂದ ಪಣಜಿಯಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ