Home ನಮ್ಮ ಜಿಲ್ಲೆ ಹಿರಿಯ ಪತ್ರಕರ್ತ ಜಿ ಎನ್ ರಂಗನಾಥ್ ರಾವ್ ನಿಧನ

ಹಿರಿಯ ಪತ್ರಕರ್ತ ಜಿ ಎನ್ ರಂಗನಾಥ್ ರಾವ್ ನಿಧನ

0

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ ಮತ್ತು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಜಿಎನ್ ರಂಗನಾಥ್ ರಾವ್ (83) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು, ಮೃತರಿಗೆ ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ. 1942ರಲ್ಲಿ ಬೆಂಗಳೂರು ಜಿಲ್ಲೆಯ ಹಾರೋಹಳ್ಳಿಯಲ್ಲಿ ಹುಟ್ಟಿದ ಜಿಎನ್ ರಂಗನಾಥ್ ಅವರು ಹೊಸಕೋಟೆ ಹಾಗೂ ಬೆಂಗಳೂರು ನಗರದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. 1962 ರಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ಉಪಸಂಪಾದಕರಾಗಿ ಪತ್ರಿಕೋದ್ಯಮದಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ನಂತರ ಅವರು ಪ್ರಜಾವಾಣಿಗೆ ಸೇರಿಕೊಂಡು ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು.

Exit mobile version