Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಯತ್ನಾಳ

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಯತ್ನಾಳ

0

ಹುಬ್ಬಳ್ಳಿ: ರಾಣಿ ಚನ್ನಮ್ಮ (ಈದ್ಗಾ ಇರುವ ಸ್ಥಳ) ಮೈದಾನದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯ ವಿಸರ್ಜನೆಯು ಗುರುವಾರ ನಡೆಯಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರಾದ ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ, ಗುರುವಾರ ಬೆಳಗ್ಗೆ 11:45ಕ್ಕೆ ಈದ್ಗಾ ಮೈದಾನದಿಂದ ಆರಂಭವಾಗುವ ವಿಸರ್ಜನಾ ಮೆರವಣಿಗೆ ಕಿತ್ತೂರು ಚನ್ನಮ್ಮ ವೃತ್ತ, ಹಳೇ ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತ ಮಾರ್ಗವಾಗಿ ಇಂದಿರಾ ಗಾಜಿನ ಮನೆ ಪಕ್ಕದಲ್ಲಿರುವ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗುವುದು ಎಂದರು.
ಅಂತರ ಕಾಯ್ದುಕೊಂಡಿದ್ದ ಶೆಟ್ಟರ ಹಾಜರ್
ಪಕ್ಷದ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ತಮ್ಮನ್ನು ಆಹ್ವಾನಿಸದೇ ಕಡೆಗಣಿಸಲಾಗುತ್ತಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಅವರು ಬುಧವಾರ ನಡೆದ ಶಾಸಕದ್ವಯರ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು! ಶಾಸಕದ್ವಯರ ಆಹ್ವಾನದ ಮೇರೆಗೆ ಗೋಷ್ಠಿಗೆ ಹಾಜರಾಗಿದ್ದ ಅವರು ಗೋಷ್ಠಿಯಲ್ಲಿ ಏನೂ ಮಾತನಾಡಲಿಲ್ಲ. ಅವರ ಹಾಜರಾತಿಯೇ ಎದ್ದು ಕಂಡಿತು.

Exit mobile version