Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಹೃದಯಾಘಾತ ವಿದ್ಯಾರ್ಥಿನಿ ಸಾವು

ಹೃದಯಾಘಾತ ವಿದ್ಯಾರ್ಥಿನಿ ಸಾವು

0


ಮಂಗಳೂರು: ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ಕಾರ್ಯಕ್ರಮ ಬೆಳ್ತಂಗಡಿ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ (19) ಅವರು ಆ.13 ರಂದು ಮೃತಪಟ್ಟ ಯುವತಿ.
ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆ.9 ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದಿದ್ದರು. ಆ.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮತ್ತೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ತೆರಳಿದ್ದರು. ಆದರೆ ಆ.13ರಂದು ಸಂಜೆ ಮತ್ತೆ ಹೃದಯಘಾತಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರು ತಂದೆ – ತಾಯಿ ಸಹೋದರನನ್ನು ಅಗಲಿದ್ದಾರೆ.

Exit mobile version