ಚಿಕ್ಕಮಗಳೂರು: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲ್ಲೂಕ್ಕಿನ ಕಲ್ಲಕ್ಕಿ ಎಸ್ಟೇಟ್‌ನಲ್ಲಿ ನಡೆದಿದೆ.
ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ.
5 ಜನರ ಮೇಲೆ ದಾಳಿ ನಡೆಸಿದ್ದು, ವಿನೋದಾ, ಪುಷ್ಪಾ, ಪ್ರೇಮಾ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಣಕಲ್‌ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿದ್ದು ಜನ ಓಡಾಡುವುದಕ್ಕೆ ಭಯಪಡುವಂತಾಗಿದೆ.