ಹೊಸರಿತ್ತಿ ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಬೊಮ್ಮಾಯಿ ಆಗ್ರಹ

0
12
ಆರ್‌ಎಸ್ಎಸ್

ಹಾವೇರಿ: ಇತ್ತೀಚೆಗೆ ಹೊಸರಿತ್ತಿ ಪೊಲಿಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದಪ್ಪ ಪೂಜಾರ್ ಎನ್ನುವ ವ್ಯಕ್ತಿ ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಈ ಪ್ರಕರಣ ಸ್ಥಳೀಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ. ಸಿಐಡಿಯಿಂದ ವಿಚಾರಣೆ ಆಗಬೇಕು ಎಂದು ಈಗಾಗಲೇ ಡಿಜಿಯವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು. ಈ ಪ್ರಕರಣದಲ್ಲಿ ಬಹಳಷ್ಟು ಸಂಶಯಗಳಿವೆ. ಮೇಲ್ನೋಟಕ್ಕೆ ಪೊಲೀಸರ ಹಲ್ಲೆಯಿಂದ ವ್ಯಕ್ತಿ ಅಸ್ತವ್ಯಸ್ತವಾಗಿ ಸತ್ತಿದ್ದಾನೆಂದು ಅನಿಸುತ್ತಿದೆ. ಸ್ಪಷ್ಟವಾಗಿ ಏನೇನು ನಡೆದಿದೆ ಎಂದು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Previous articleಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆ ಸೂರ್ಯ, ಚಂದ್ರರಷ್ಟೇ ಸತ್ಯ
Next articleಉದ್ಯಮಿಗೆ ವಂಚನೆ ಪ್ರಕರಣ: ಸ್ವಾಮೀಜಿ ನಾಪತ್ತೆ