ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ತೆರಿಗೆ ವಂಚನೆ ಸಂಬಂಧ ಇಂದು ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.