Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಾಗಲಕೋಟೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

ಬಾಗಲಕೋಟೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

0
82

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದರು.

ಬಾಗಲಕೋಟೆ ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ರಾಘವೇಂದ್ರ ರಾಯರ ಮಠಕ್ಕೆ ತೆರಳಿ ಆಶೀರ್ವಾದ ಪಡೆದರು. ತದನಂತರ ತಮ್ಮ ತಂದೆ ದಿವಂಗತ ಹೆಚ್.ವೈ. ಮೇಟಿ ಅವರ ಸಮಾಧಿಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು.

ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಚುನಾವಣೆ ಮುಂದಿನ ರಾಜ್ಯ ರಾಜಕೀಯದ ದಿಕ್ಕು ತೋರಿಸುವ ಪ್ರಮುಖ ಪರೀಕ್ಷೆಯಾಗಿ ಕಾಣುತ್ತಿದೆ.