Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ

0
115

ಬಾಗಲಕೋಟೆ: 2025-26ರ ಬಜೆಟ್‌ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೆ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವ ಕಳೆದು ಹತ್ತು ವರ್ಷಗಳಿಂದ ನಡೆದಿರಲಿಲ್ಲ. ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವವನ್ನು ಆಯೋಜಿಸಲಾಗಿದ್ದು, ಸಂತೋಷದಿಂದ ಭಾಗವಹಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಕಚೇರಿಯಲ್ಲಿಯೇ ಡಿಜಿಪಿ ರಾಸಲೀಲೆ: ವಿಡಿಯೋ ವೈರಲ್

ನಮ್ಮ ಅವಧಿಯಲ್ಲಿಯೇ ಬಾದಾಮಿಯ ಆಭಿವೃದ್ಧಿ: ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರೆಸಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.