ಕುಳಗೇರಿ ಕ್ರಾಸ್: ವಿಬಿ-ಜಿ ರಾಮ್‌ಜಿ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಮಮ್ಮಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಮ್ಮಟಗೇರಿ, ತಪ್ಪಸಕಟ್ಟಿ, ಕಲ್ಲಾಪೂರ ಎಸ್‌ಕೆ ಗ್ರಾಮದ ನೂರಾರು ಕೂಲಿ ಕಾರ್ಮಿಕರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗುತ್ತ ಪ್ರತಿಭಟನಾ ರ‍್ಯಾಲಿ ನಡೆಸುವ ಮೂಲಕ ಹಕ್ಕೊತ್ತಾಯಿಸಿದರು.
ಮಮ್ಮಟಗೇರಿ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಸೇರಿದ್ದ ಕೂಲಿ ಕಾರ್ಮಿಕರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಘೋಷನೆ ಕೂಗುತ್ತ ರ‍್ಯಾಲಿ ನಡೆಸಿ ಗ್ರಾಮ ಪಂಚಾಯತಿಗೆ ತೆರಳಿ ಗ್ರಾಪಂ ಅಧ್ಯಕ್ಷೆ ಪದ್ಮಾವತಿ ಡೊಳ್ಳಿನ ಹಾಗೂ ಅಭಿವೃದ್ಧಿ ಅಧಿಕಾರಿ ಸವಿತಾ ನಂದೆಪ್ಪನವರ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ಮನೆಗೆ ಬಿಜೆಪಿ ನಾಯಕರ ಭೇಟಿ
ಪ್ರಭಾವತಿ ಕುರಿ ಮಾತನಾಡಿ, ಕೇಂದ್ರ ಸರ್ಕಾರ ತನ್ನ ಪಾಲನ್ನು ಶೆ. 90 ರಿಂದ ಶೇ. 60ಕ್ಕೆ ಇಳಿಸಿ ರಾಜ್ಯ ಸರ್ಕಾರದ ಮೇಲೆ ಶೇ. 40ರಷ್ಟು ಹೊರೆ ಹಾಕಿರುವುದನ್ನು ಯಾವ ರಾಜ್ಯ ಸರ್ಕಾರವು ಒಪ್ಪುವುದಿಲ್ಲ. ಹಾಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಹ ಕೊಡಲು ಸಾಧ್ಯವಿಲ್ಲ ಎಂದು ಪತ್ರಿಕೆ ಹೇಳಿಕೆ ನೀಡಿದ್ದಾರೆ. ಇದರಿಂದ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಸಿಗುವ ನಂಬಿಕೆ ಇಲ್ಲವಾಗಿದೆ ಎಂದು ಹೇಳಿದರು.























