Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ನಿವೇಶನ ಹಂಚಿಕೆ ಅಕ್ರಮ ಆರೋಪ: ಲೋಕಾಯುಕ್ತ ದಾಳಿ

ನಿವೇಶನ ಹಂಚಿಕೆ ಅಕ್ರಮ ಆರೋಪ: ಲೋಕಾಯುಕ್ತ ದಾಳಿ

0
367

ಬಾಗಲಕೋಟೆ: ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಬಾಗಲಕೋಟೆ ಪಟ್ಟಣದಲ್ಲಿರುವ ಪುನರ್ವಸತಿ ಅಧಿಕಾರಿಗಳ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಎಸ್ಪಿ ಮಹಾನಿಂಗ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.