Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಕಾಂಗ್ರೆಸ್ ಗೆಲುವು: ಕಾರ್ಯಕರ್ತರೊಡನೆ ಶಾಸಕ ಚಿಮ್ಮನಕಟ್ಟಿ ಸಂಭ್ರಮ

ಕಾಂಗ್ರೆಸ್ ಗೆಲುವು: ಕಾರ್ಯಕರ್ತರೊಡನೆ ಶಾಸಕ ಚಿಮ್ಮನಕಟ್ಟಿ ಸಂಭ್ರಮ

0
23

ಬಾಗಲಕೋಟೆ(ಕುಳಗೇರಿ ಕ್ರಾಸ್): ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದರಿಂದ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾರ್ಯಕರ್ತರ ಜತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ‌

ಈ ವೇಳೆ ಮಾತನಾಡಿದ ಭೀಮಸೇನ ಚಿಮ್ಮನಕಟ್ಟಿ, ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನ ಆಯ್ಕೆ ಮಾಡುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಗೆಲುವಿಗೆ ಕಾರಣ ಎಂದು ಹೇಳಿದರು.

ಸಂಭ್ರಮಾಚರಣೆಯಲ್ಲಿ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.