ಬಾಗಲಕೋಟೆ: ಕುಳಗೇರಿ ಕ್ರಾಸ್ ಹೊರವಲಯದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತೋಟದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ತನ್ನ ಹೆಂಡತಿ ಹಾಗೂ ಆರೋಪಿ ಸಂಜಯ್ ಮೇಲೆ ಕೊಲೆಯಾದ ಸೋಮಶೇಖರ ಸಂಶಯ ಪಡುತ್ತಿದ್ದ ಎಂಬ ಕಾರಣಕ್ಕೆ ಸಂಜಯ ಕಿಳ್ಳಿಕೇತರ ಎಂಬ ವ್ಯಕ್ತಿ ಸೋಮಶೇಖರನಿಗೆ ಕಂಠಪೂರ್ತಿ ಕುಡಿಸಿ ಕೊಲೆ ಮಾಡಿದ್ದಾನೆಂದು ಮೂಲಗಳು ತಿಳಿಸಿವೆ.
ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಮತ್ತಷ್ಟು ಮಾಹಿತಿ ತಿಳಿಯಲಿದೆ.






















