SK Home Ad
Home ನಮ್ಮ ಜಿಲ್ಲೆ ಬಾಗಲಕೋಟೆ ಶಾಲೆ ಮೇಲ್ಛಾವಣಿ ಕುಸಿತ: ಮುಖ್ಯಶಿಕ್ಷಕರಿಂದ ಮುಖ್ಯ ಕಾರ್ಯದರ್ಶಿವರೆಗೆ ಲೋಕಾಯುಕ್ತರ ಕೇಸ್!

ಶಾಲೆ ಮೇಲ್ಛಾವಣಿ ಕುಸಿತ: ಮುಖ್ಯಶಿಕ್ಷಕರಿಂದ ಮುಖ್ಯ ಕಾರ್ಯದರ್ಶಿವರೆಗೆ ಲೋಕಾಯುಕ್ತರ ಕೇಸ್!

0
36

ಬಾಗಲಕೋಟೆ: ಮುಗಳ್ಳೊಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತದ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು ಶಾಲಾ ಮುಖ್ಯಶಿಕ್ಷಕರ ವರೆಗೆ ಎಲ್ಲರ ಮೇಲೆ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಹೊರಡಿಸಿರುವ ಆದೇಶದಲ್ಲಿ “ಸಂಯುಕ್ತ ಕರ್ನಾಟಕ” ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯನ್ನು ಉಲ್ಲೇಖಿಸಿರುವ ಅವರು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಠ ಮಾಡುತ್ತಿರುವಾಗಲೇ ಮಕ್ಕಳ ಮೇಲೆ ಬಿತ್ತು ಸರಕಾರಿ ಶಾಲೆಯ ಮೇಲ್ಛಾವಣಿ!

ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು, ಹೆಚ್ಚುವರಿ ಆಯುಕ್ತರು, ಬಾಗಲಕೋಟೆ ಜಿಲ್ಲಾಧಿಕಾರಿ, ಜಿಪಂ ಸಿಇಒ, ಡಿಡಿಪಿಐ, ಬಿಇಒ, ಶಾಲೆಯ ಮುಖ್ಯಶಿಕ್ಷಕರು, ಪಂಚಾಯತ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವಿರುದ್ಧ ದೂರು ದಾಖಲಿಸಿಕೊಂಡು ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ ಆದೇಶಿಸಿದ್ದಾರೆ.