Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ – 8 ಮಂದಿ ಬಂಧನ

ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ – 8 ಮಂದಿ ಬಂಧನ

0
225

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಸಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ತನ್ವೀರ್ ಸೇರಿ ಒಟ್ಟು 8 ಜನರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಘಟನೆಯಲ್ಲಿ ತಾವೂ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಎಸ್ಪಿ ತಿಳಿಸಿದರು.

ಇದನ್ನೂ ಓದಿ: ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ

ತರಕಾರಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಪ್ರಕರಣ : ಇದೇ ವೇಳೆ, ಕಲ್ಲುತೂರಾಟದ ಘಟನೆ ಬಳಿಕ ನಗರದಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶದ ಗೂಡಂಗಡಿಗೆ ಬೆಂಕಿ ಹಚ್ಚಿದ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಬೈಕ್‌ನಲ್ಲಿ ಬಂದು ಕೃತ್ಯ ಎಸಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಮಾಹಿತಿಯ ಆಧಾರದ ಮೇಲೆ ಆರೋಪಿಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ವಾಪಸ್: ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್

ಭದ್ರತೆ ಬಿಗಿ – ಶಾಂತಿ ಕಾಪಾಡಲು ಮನವಿ : ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಲಾಗಿದೆ.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ.

Previous articleಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ
Next articleKMF ಉತ್ಪನ್ನಗಳ ಬಗ್ಗೆ ಕ್ಯಾನ್ಸರ್ ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಿಮಿನಲ್ ಕೇಸ್